×
Ad

ತೈಲ ಬೆಲೆ ಏರಿಕೆಗೆ ಉಡುಪಿ ಜಿಲ್ಲಾ ಜೆಡಿಎಸ್ ಖಂಡನೆ

Update: 2021-06-12 20:12 IST

ಉಡುಪಿ, ಜೂ.12: ಜೀವನಾವಶ್ಯಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಉಡುಪಿ ಜಿಲ್ಲಾ ಜಾತ್ಯತೀತ ಜನತಾ ದಳದ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಖಂಡಿಸಿದ್ದಾರೆ.

ಕೊರೋನದಿಂದಾಗಿ ತೀವ್ರವಾದ ಆರ್ಥಿಕತೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಯಲ್ಲಿ ತೈಲೋತ್ಪನ್ನ ಗಳಿಂದ ಬೊಕ್ಕಸಕ್ಕೆ ಬರುವ ಆದಾಯಕ್ಕೆ ಕತ್ತರಿ ಹಾಕಲು ಕೇಂದ್ರ ಮತ್ತು ರಾಜ್ಯ ಸರಕಾರಗಳು. ಸಿದ್ಧವಾಗಿಲ್ಲ. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳುವಂತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದೀಗ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿದು,್ದ ನಿರ್ಬಂಧಗಳು ಸಡಿಲಗೊಳ್ಳತೊಡಗಿವೆ. ಆದರೆ ತೈಲ ಬೆಲೆಗಳು ಏರುಮುಖಿಯಾಗಿದ್ದರೆ, ಜನಜೀವನ ಮಾತ್ರವಲ್ಲದೆ ಇಡೀ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಲು ತುಂಬಾ ಸಮಯ ತಗಲುತ್ತದೆ. ಜನಸಾಮಾನ್ಯರಿಗೆ ತೈಲ ಬೆಲೆಗಳ ಹೊರೆಯಿಂದ ಜೀವನ ಸಾಗಿಸುವುದು ಕಷ್ಟವಾಗಲಿದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಿನ ತನ್ನ ಪಾಲಿನ ತೆರಿಗೆ ಯನ್ನು ಕಡಿತಗೊಳಿಸಬೇಕು. ಜೊತೆಗೆ ರಾಜ್ಯ ಸರಕಾರಗಳು ವಾಟ್ ಸಹಿತ ಸ್ಥಳೀಯ ತೆರಿಗೆಗಳಲ್ಲಿ ರಿಯಾಯಿತಿಯನ್ನು ನೀಡುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡಲೇ ಕಡಿಮೆ ಗೊಳಿಸಬೇಕು ಎಂದವರು ಒತ್ತಾಯಿಸಿದ್ದಾರೆ.

ವಿದ್ಯುತ್ ದರ ಏರಿಕೆ: ಕೊರೋನ ಹಾವಳಿ ಮತ್ತು ಲಾಕಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ವಿದ್ಯುತ್ ದರ ವನ್ನು ಹೆಚ್ಚಳ ಮಾಡಿ ರಾಜ್ಯ ಸರಕಾರ ಮತ್ತೊಂದು ಶಾಕ್ ನೀಡಿದೆ. ರಾಜ್ಯ ಸರಕಾರ ವಿದ್ಯುತ್ ದರ ಏರಿಕೆಯನ್ನು ಕೂಡಲೇ ಕೈ ಬಿಡಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಯೋಗೀಶ್ ಶೆಟ್ಟಿ ಸರಕಾರವನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News