ಕುಂದಾಪುರ: ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Update: 2021-06-12 16:36 GMT

ಕುಂದಾಪುರ, ಜೂ.12: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ 100 ನಾಟೌಟ್ ಅಭಿಯಾನದ ಅಂಗವಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಶನಿವಾರ ಕುಂದಾಪುರ ಸರಕಾರಿ ಆಸ್ಪತ್ರೆ ಬಳಿಯ ಎಚ್‌ಪಿ ಪೆಟ್ರೋಲ್ ಬಂಕ್ ಬಳಿ ತಟ್ಟೆ- ಸೌಟು ಬಡಿದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಕಾಂಗ್ರೆಸ್ ಜಿಲ್ಲಾ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿ ಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಹಿರಿಯ ಕಾಂಗ್ರೆಸ್ ಮುಖಂಡ ಮಲಾ್ಯಡಿ ಶಿವರಾಮ ಶೆಟ್ಟಿ ಮಾತನಾಡಿದರು.

ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಚಂದ್ರಶೇಖರ್ ಖಾರ್ವಿ, ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ವಿನೋದ್ ಕ್ರಾಸ್ತ, ಉಪಾಧ್ಯಕ್ಷ ಅಶೋಕ್ ಪೂಜಾರಿ, ಪ್ರಮುಖರಾದ ಚಂದ್ರಶೇಖರ್ ಶೆಟ್ಟಿ, ಗಣೇಶ್ ಶೇರಿಗಾರ್, ರೋಶನ್ ಶೆಟ್ಟಿ, ಹಾರೂನ್ ಸಾಹೇಬ್ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೈಂದೂರಿ ನಲ್ಲಿ ನಡೆದ ಪ್ರತಿಭಟನೆ ಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ಕೊರೋನಾ ಸಂದರ್ಭ ದಲ್ಲಿ ಪೆಟ್ರೋಲ್ ಬೆಲೆ 100ಕ್ಕೆ ಏರಿಸಿ, ಡಿಸೇಲ್ ಬೆಲೆ 94ಕ್ಕೆ ಏರಿಕೆ ಮಾಡ ಲಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಈಗ 800ರಿಂದ 900 ತನಕ ಏರಿಕೆಯಾಗಿದೆ. 2020ರ ನಂತರ ಸಬ್ಸಿಡಿಯನ್ನೂ ರದ್ದು ಮಾಡಲಾಗಿದೆ. ಉದ್ಯೋಗ ಸೃಷ್ಟಿಸುವ ಭರವಸೆಯನ್ನೂ ನೀಡಿ ಮೋದಿ ಸುಳ್ಳು ಹೇಳಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜು ಪೂಜಾರಿ, ಮದನ್ ಕುಮಾರ್, ನಾಗರಾಜ್ ಗಾಣಿಗ, ಜಗದೀಶ್ ದೇವಾಡಿಗ, ಗೌರಿ ದೇವಾಡಿಗ, ಶೇಖರ್ ಪೂಜಾರಿ, ದಿನೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

ಕಾಪು: ಪೆಟ್ರೊಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ದ ಜಿಲ್ಲಾ ಎನ್‌ಎಸ್ ಯುಐ ಅಧ್ಯಕ್ಷ ಸೌರಭ್ ಬಳ್ಳಾಳ್ರ ಮಾರ್ಗದರ್ಶನದಲ್ಲಿ ಜಿಲ್ಲಾ ಉಪಾಧ್ಯಕ್ಷ ಝಮಿರ್ ನೇತೃತ್ವದಲ್ಲಿ ಕಾಪುವಿನ ಹೆದ್ದಾರಿಯ ಪೆಟ್ರೋಲ್ ಬಂಕಿನ ಎದುರು ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವ ಮುಖಂಡ ವಿಶ್ವಾಸ್ ವಿ.ಅಮೀನ್, ಕಾಪು ಉತ್ತರ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಸಾಲ್ಯಾನ್, ಕೃಷ್ಣ ಶೆಟ್ಟಿ, ಪ್ರದೀಪ್ ನಲ್ಲೂರು, ಎನ್‌ಎಸ್‌ಯುಐ ಜಿಲ್ಲಾ ಕಾರ್ಯದರ್ಶಿ ಅಖಿಲ್ ಕರ್ಕೇರ, ಆಕಾಶ್, ಅಕ್ರಂ, ಫಾಯಲ್, ನಿಯಾಝ್, ರಾಹೀದ್, ಪ್ರಸಾದ್, ವಿಜಯ್, ಸುಶಾನ್, ಕಿರಣ, ಆಲ್ಸ್ಟಾನ್, ಅಶ್ವಿನ್ ಮಡಿವಾಲ, ಹರ್ಷ ಶೆಟ್ಟಿ, ಗಣೇಶ್ ದೇವಾಡಿಗ, ನಬೀಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News