ಲಾರಿ ಢಿಕ್ಕಿ: ನಾಲ್ವರು ಚೆಸ್ಕಾಂ ಸಿಬ್ಬಂದಿಗಳಿಗೆ ಗಂಭೀರ ಗಾಯ

Update: 2021-06-12 16:38 GMT

ಮಡಿಕೇರಿ: ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ಸಂದರ್ಭ ಲಾರಿಯೊಂದು ಢಿಕ್ಕಿಯಾಗಿ ನಾಲ್ವರು ಚೆಸ್ಕಾಂ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪದ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. 

ಎಲ್ಲಾ ಗಾಯಾಳುಗಳನ್ನು ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News