ವೈದ್ಯಕೀಯ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ

Update: 2021-06-12 17:48 GMT

ಬೆಂಗಳೂರು, ಜೂ.12: ರಾಜ್ಯ ವ್ಯಾಪ್ತಿಯ ಕಾರಾಗೃಹಗಳಲ್ಲಿ ಖಾಲಿ ಉಳಿದಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿಗೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಕಾರಾಗೃಹಗಳಲ್ಲಿ ಖೈದಿಗಳ ಆರೋಗ್ಯ ಸುರಕ್ಷತೆ ಹಾಗೂ ಜೀವನಮಟ್ಟ ಸುಧಾರಣಾ ಸಂಬಂಧ ಸ್ವಯಂ ಪ್ರೇರಿತ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಆರಂಭದಲ್ಲಿ ಸರಕಾರದ ಪರ ವಕೀಲರು, ರಾಜ್ಯದ ಕಾರಾಗೃಹಗಳಲ್ಲಿ 114 ವೈದ್ಯಕೀಯ ಹುದ್ದೆಗಳಿದ್ದು, ಅವುಗಳಲ್ಲಿ 86 ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಮನವಿ ಪರಿಗಣಿಸಿದ ಪೀಠ ಮುಂದಿನ ಮೂರು ತಿಂಗಳ ಒಳಗೆ ಖಾಲಿ ಇರುವ ವೈದ್ಯಕೀಯ ಹುದ್ದೆಗಳ ಜತೆಗೆ ಅರೆ ವೈದ್ಯಕೀಯ ಹುದ್ದೆಗಳನ್ನೂ ಭರ್ತಿ ಮಾಡುವಂತೆ ನಿರ್ದೇಶಿಸಿ, ಜೈಲುಗಳಲ್ಲಿ ಸಂದರ್ಶಕರ ಭೇಟಿಗೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ ಎಂಬುದರ ಕುರಿತು ಪರಿಶೀಲನೆ ನಡೆಸಲು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ದಿಢೀರ್ ಭೇಟಿ ನೀಡಿ ಪರಿಶೀಲಿಸುವಂತೆಯೂ ಉಲ್ಲೇಖಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News