ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಕೆಎಸ್ಸಾರ್ಟಿಸಿ ಎಂಡಿ ಶಿವಯೋಗಿ ಸಿ.ಕಳಸದ

Update: 2021-06-12 17:50 GMT

ಧಾರವಾಡ, ಜೂ. 12: ಇಲ್ಲಿನ ರಾಯಪುರದಲ್ಲಿ 5.36 ಎಕರೆ ಜಾಗದಲ್ಲಿ 15.50ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ವಾಹನ ತಪಾಸಣಾ ಮತ್ತು ಪ್ರಮಾಣೀಕೃತ ಕೇಂದ್ರ, 4 ಎಕರೆ ವಿಸ್ತೀರ್ಣದಲ್ಲಿ 5.75 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಚಾಲಕರ ಪರೀಕ್ಷಾ ಸ್ವಯಂಚಾಲಿತ ಚಾಲನಾ ಪಥ ಹಾಗೂ ಸಂವೇದಕಗಳು ಮತ್ತು 8ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಕಚೇರಿ ಕಾಮಗಾರಿಗಳನ್ನು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಪರಿಶೀಲನೆ ನಡೆಸಿದರು.

ಶನಿವಾರ ಧಾರವಾಡಕ್ಕೆ ಭೇಟಿ ನೀಡಿದ ಅವರು, ವಾಹನ ತಪಾಸಣಾ ಮತ್ತು ಪ್ರಮಾಣೀಕೃತ ಕೇಂದ್ರ ಹಾಗೂ ಚಾಲಕರ ಪರೀಕ್ಷಾ ಸ್ವಯಂಚಾಲಿತ ಚಾಲನಾ ಪಥ ಹಾಗೂ ಸಂವೇದಕಗಳ ಅಂತಿಮ ಹಂತದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಅಲ್ಲದೆ, ಕಾಮಗಾರಿ ಪೂರ್ಣಗೊಂಡ ಬಳಿಕ ಸಾರ್ವಜನಿಕರ ಉಪಯೋಗಕ್ಕೆ ಚಾಲನೆ ನೀಡುವ ಬಗ್ಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಾರಿಗೆ ಆಯುಕ್ತರ ಜತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News