ಕೊಳ್ಳೇಗಾಲ: ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

Update: 2021-06-12 18:46 GMT

ಹನೂರು: ಖಾಸಗಿ ಆಸ್ಪತ್ರೆಯ ಖಾಲಿ‌ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ‌ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ.

ಅಂದಾಜು 6 ದಿನದ ಗಂಡು ಶಿಶು ಇದಾಗಿದ್ದು, ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಟ್ಟಿದ್ದು ಅಂಗವೈಕಲ್ಯ ಹೊತ್ತುಕೊಂಡು‌ ಜನಿಸಿರುವ ಕಾರಣ ಹೆತ್ತವರು ಪ್ಲಾಸ್ಟಿಕ್ ಕವರ್ ನಲ್ಲಿ ಮಗುವನ್ನು ಹಾಕಿ ಬಿಸಾಡಿರುವುದು ಬಗ್ಗೆ ಶಂಕೆ ವ್ಯಕ್ತವಾಗಿದೆ.

ಆಸ್ಪತ್ರೆ ಸಿಬ್ಬಂದಿ ಶವಾಗಾರದ ಬಳಿ ಹೋದಾಗ ದುರ್ನಾತ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ
ಶಿಶು ಮೃತದೇಹ ಪತ್ತೆಯಾಗಿದೆ.  ಸಿಸಿಟಿವಿ ಪರಿಶೀಲಿಸಲಾಗುತ್ತಿದ್ದು ,ತನಿಖೆ ನಡೆಸಲಾಗುತ್ತಿದೆ ಎಂದು ಪಿಐ ಸಂತೋಷ್ ಕಶ್ಯಪ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News