ದಿಲ್ಲಿ: 50 ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರ ಗುಡಿಸಲು ಬೆಂಕಿಗಾಹುತಿ

Update: 2021-06-13 06:32 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಆಗ್ನೇಯ ದಿಲ್ಲಿಯ ಕಲಿಂಡಿ ಕುಂಜ್ ಮೆಟ್ರೋ ನಿಲ್ದಾಣದ ಬಳಿಯ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 50 ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟುಕರಕಲಾಗಿವೆ ಎಂದು ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಶನಿವಾರ ಈ ಘಟನೆ ನಡೆದಿದ್ದು, ರಾತ್ರಿ 11.55 ರ ಸುಮಾರಿಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ದೊರೆತಿದೆ ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ಬೆಂಕಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮದನ್‌ಪುರ ಖಾದರ್‌ನ ಕಲಿಂಡಿ ಕುಂಜ್ ಮೆಟ್ರೋ ನಿಲ್ದಾಣದ ಬಳಿ ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಸುಮಾರು 270 ರೋಹಿಂಗ್ಯಾ ನಿರಾಶ್ರಿತರು ವಾಸಿಸುತ್ತಿದ್ದ ಐವತ್ತಾರು ಗುಡಿಸಲುಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ. ಬೆಂಕಿಯ ಕಾರಣ ಇನ್ನಷ್ಟೇ ಗೊತ್ತಾಗಬೇಕಾಗಿದೆ. ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ" ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ) ಆರ್. ಪಿ .ಮೀನಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News