ರಾಜ್ಯದಲ್ಲಿರುವ ಬಾಂಗ್ಲಾ, ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಕ್ರಮ: ಸಿಎಂ ಯಡಿಯೂರಪ್ಪ

Update: 2021-06-13 11:37 GMT

ಶಿವಮೊಗ್ಗ, ಜೂ.13: ಶ್ರೀಲಂಕಾ ಹಾಗೂ ಬಾಂಗ್ಲಾದೇಶದ ಅಕ್ರಮ ವಲಸಿಗರು ರಾಜ್ಯದಲ್ಲಿ ವಾಸ್ತವ್ಯ ಹೂಡಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕ್ರಮವಾಗಿ ವಲಸಿಗರು ಇದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. 

ನಾಳೆಯಿಂದ ರಾಜ್ಯದ ಕೆಲ ಭಾಗದಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡುವ ಸಂಬಂಧ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಅಲ್ಲಿ ಅನ್ ಲಾಕ್ ಬಗ್ಗೆ ಅಂತಿಮ‌ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು. 

ರಾಜ್ಯದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದೆ. ಈಗಾಗಲೇ ಭಗವಂತನ ದಯೆಯಿಂದ ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಮುಂಗಾರು ಮಳೆಯಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಮಳೆಯಾಗಲಿದೆ. ಒಳ್ಳೆಯ ಬೆಳೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News