ಸೋಮವಾರದಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Update: 2021-06-13 11:47 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.13: ರಾಜ್ಯದಲ್ಲಿ ಮುಂಗಾರು ಮಾರುತಗಳು ಚುರುಕಾಗಿರುವ ಪರಿಣಾಮ ಸೋಮವಾರದಿಂದ(ಜೂ.14) ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.14ರಿಂದ ಎರಡು ದಿನ ಯೆಲ್ಲೋ ಅಲರ್ಟ್ ಇದ್ದರೆ, ಜೂ.16ರಿಂದ 48 ಗಂಟೆ ಭಾರೀ ಮಳೆ ನಿರೀಕ್ಷೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಜೂ.14ರಿಂದ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News