×
Ad

ಸಭೆ ಸಮಾರಂಭ ನಡೆಸಿದರೆ ಕಠಿಣ ಕ್ರಮ: ಉಡುಪಿ ಜಿಲ್ಲಾಧಿಕಾರಿ

Update: 2021-06-13 19:29 IST

ಉಡುಪಿ, ಜೂ.13: ಆಹಾರ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ಮುಂತಾದ ವೈದ್ಯಕೀಯ ಪರಿಕರಗಳನ್ನು ವಿತರಿಸುವ ಸಂಘಸಂಸ್ಥೆಗಳು ಯಾವುದೇ ಸಭೆ ಸಮಾರಂಭಗಳನ್ನು ಆಯೋಜಿಸದೆ ಅವುಗಳನ್ನು ನೇರವಾಗಿ ಫಲಾನುಭವಿ ಗಳಿಗೆ ನೀಡಬೇಕು. ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಸಭೆ ಸಮಾರಂಭ ನಡೆಸುವ, ಆಯೋಜಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅನೇಕ ಸಂಘಸಂಸ್ಥೆಗಳು ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದನ್ನು ಗಮನಿಸಲಾಗಿದೆ. ಇವು ಚಾಲ್ತಿಯಲ್ಲಿರುವ ಮಾರ್ಗ ಸೂಚಿಗಳಿಗೆ ಅನುಗುಣವಾಗಿಲ್ಲ. ಅಲ್ಲದೆ ಕೋವಿಡ್ ಪ್ರಕರಣಗಳ ಪ್ರಸರಣಕ್ಕೆ ಕಾರಣವಾಗಿ ಈವರೆಗೆ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಪ್ರಯತ್ನಗಳಿಗೆ ಹಿನ್ನಡೆಯಾಗಿ ಪ್ರಕರಣಗಳಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಆದುದರಿಂದ ಸಂಘಸಂಸ್ಥೆಗಳು, ಸಾರ್ವಜನಿಕರು ಯಾವುದೇ ಸನ್ಮಾನದಂತಹ ಮತ್ತು ಇತರೆ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ಅವರು ಹೇಳಿದ್ದಾರೆ.

ಜಿಲ್ಲಾಡಳಿತವು ಆರೋಗ್ಯ ಇಲಾಖೆ, ಗ್ರಾಪಂ ಟಾಸ್ಕ್ ಫೋರ್ಸ್‌ಗಳ ಮತ್ತು ಸಾರ್ವಜನಿಕರ ಸತತ ಸಹಕಾರದಿಂದ ಕೋವಿಡ್ ಮಹಾ ಮಾರಿಯನ್ನು ನಿಯಂತ್ರಿಸುವಲ್ಲಿ ಗಣನೀಯ ಯಶಸ್ಸನ್ನು ಕಂಡಿದ್ದು, ಕೋವಿಡ್ ಪಾಸಿಟಿವಿಟಿ ಪ್ರಮಾಣ ತೀವ್ರಗತಿಯಲ್ಲಿ ಇಳಿಮುಖ ಕಂಡಿದೆ. ಅದರ ಫಲಶ್ರುತಿ ಯಾಗಿ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿದಿದ್ದರೂ ಉಡುಪಿ ಜಿಲ್ಲೆಯಲ್ಲಿ ಹಲವಾರು ವಿನಾಯಿತಿಗಳನ್ನು ಘೋಷಿಸಲಾಗಿದೆ. ಕೈಗಾರಿಕೆಗಳನ್ನು ನಡೆಸಲು ಅನುಮತಿಸಲಾಗಿದೆ. ಅಗತ್ಯ ವಸ್ತುಗಳ ಅಂಗಡಿಗಳ ಸಮಯವನ್ನು ಮಧ್ಯಾಹ್ನ 2ಗಂಟೆಯವರೆಗೆ ವಿಸ್ತರಿಸಲಾಗಿದೆ. ಮದುವೆ ಕಾರ್ಯ ಕ್ರಮವನ್ನು ಮಾತ್ರ ಅವರವರ ಮನೆಯಲ್ಲಿ ಗರಿಷ್ಠ 40 ಜನರ ಮಿತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News