×
Ad

ಕರಾಟೆ ಶಿಕ್ಷಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

Update: 2021-06-13 20:13 IST

ಉಡುಪಿ, ಜೂ.13: ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ಅಂಬಲಪಾಡಿ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಸಹಯೋಗ ದೊಂದಿಗೆ ದಾನಿಗಳ ನೆರವಿನಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ಕರಾಟೆ ಶಿಕ್ಷಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮವು ದೇವದ ವಠಾರದಲ್ಲಿ ರವಿವಾರ ಜರಗಿತು.

ಅಂಬಲ ಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಮಾತನಾಡಿ, ಇಡೀ ವಿಶ್ವವೇ ಕೊರೋನಾ ಮಹಾಮಾರಿಯಿಂದ ತತ್ತರಿ ಸಿರುವ ಈ ಕಾಲಘಟ್ಟದಲ್ಲಿ ಅನೇಕ ಸಂಘಸಂಸ್ಥೆಗಳು, ದಾನಿಗಳು ಜನತೆಯ ಸಂಕಷ್ಟಕ್ಕೆ ಸ್ಪಂದಿಸುತ್ತಿರುವುದು ಪ್ರಶಂಸನೀಯ. ಕೋವಿಡ್ ನಿಯಮ ಪಾಲನೆಯ ಜೊತೆಗೆ ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆ ಇಂದಿನ ಅಗತ್ಯತೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ದಾನಿಗಳಾದ ಕೆ.ಉದಯ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಕೆ.ಉದಯ ಕುಮಾರ್ ಶೆಟ್ಟಿ, ಸಾಫಲ್ಯ ಟ್ರಸ್ಟ್ ಪ್ರವರ್ತಕಿ ನಿರುಪಮಾ ಶೆಟ್ಟಿ, ನಾರಾಯಣ ಗುರು ಅರ್ಬನ್ ಕೋಅಪರೇಟಿವ್ ಬ್ಯಾಂಕ್ ಉಪಾಧ್ಯಕ್ಷೆ ವಿಜಯ ಜಿ.ಬಂಗೇರ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ, ಚೈತನ್ಯ ಸೋಷಿಯಲ್ ವೆಲ್ಫೇರ್ ಫೌಂಡೇಶನ್ ಪ್ರವರ್ತಕ ಸುನಿಲ್ ಸಾಲ್ಯಾನ್, ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ರವಿ ಸಾಲ್ಯಾನ್ ಕಟಪಾಡಿ, ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ವಾಮನ್ ಪಾಲನ್, ಗೌರವ ಸಲಹೆಗಾರ ಪ್ರಕಾಶ್ ಮಲ್ಪೆ ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News