×
Ad

ತೈಲಬೆಲೆ ಏರಿಕೆ ಖಂಡಿಸಿ ಉಡುಪಿ ಕಾಂಗ್ರೆಸ್ ನಿಂದ ‘100 ನಾಟ್‌ಔಟ್’ ಪ್ರತಿಭಟನೆ

Update: 2021-06-13 20:17 IST

ಉಡುಪಿ, ಜೂ.13: ಪೆಟ್ರೋಲಿಯೋ ಉತ್ಪನ್ನಗಳ ಬೆಲೆ ಹೆಚ್ಚಿಸಿರುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ನಗರದ ಹಳೆ ಡಯನಾ ಸರ್ಕಲ್ ಬಳಿಯ ಶೆಟ್ಟಿ ಪೆಟ್ರೋಲ್ ಬಂಕ್ ಎದುರು ‘100 ನಾಟ್‌ ಔಟ್’ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿತ್ತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, 1 ಲೀಟರ್ ಪೆಟ್ರೋಲ್ ಮೂಲಬೆಲೆ ಕಚ್ಚಾತೈಲಕ್ಕೆ 31 ರೂ. ಸಂಸ್ಕರಣೆ ವೆಚ್ಚ ಹಾಗೂ ಡೀಲರ್ ಕಮಿಷನ್ ಸೇರಿ 39 ರೂ. ಆಗುತ್ತದೆ. ರಾಜ್ಯ ಸರಕಾರದ ವ್ಯಾಟ್ ಹಾಗೂ ಸ್ಥಳೀಯ ತೆರಿಗೆ 25.32 ಹಾಗೂ ಕೇಂದ್ರದ ಅಬಕಾರಿ ಸುಂಕ 35 ರೂ. ಸೇರಿ ಒಟ್ಟು ಪೆಟ್ರೋಲ್ ಬೆಲೆ ಲೀಟರಿಗೆ 100 ರೂ.ಗೂ ಮಿಕ್ಕಿದೆ ಎಂದು ದೂರಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಕಿಣಿ, ಉದ್ಯಾವರ ನಾಗೇಶ್ ಕುಮಾರ್, ಜ್ಯೋತಿ ಹೆಬ್ಬಾರ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕುಶಲ್ ಶೆಟ್ಟಿ, ಬಿ.ನರಸಿಂಹ ಮೂರ್ತಿ, ಕಾರ್ಯದರ್ಶಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ, ಕೀರ್ತಿ ಶೆಟ್ಟಿ, ಬ್ಲಾಕ್ ಉಪಾಧ್ಯಕ್ಷರಾದ ಸದಾಶಿವ ಅಮೀನ್ ಕಟ್ಟೆಗುಡ್ಡೆ, ನಗರಸಭೆ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್, ಎಸ್.ಸಿ. ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್, ಮಾಧವ ಬನ್ನಂಜೆ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

ವಂಡ್ಸೆ: ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಚಿತ್ತೂರಿನ ಪೆಟ್ರೋಲ್ ಬಂಕ್ ಎದುರು ರವಿವಾರ ಬಿಜೆಪಿ ಸರಕಾರದ0 ತೈಲ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕೋವಿಡ್ ಸಂಕಷ್ಟ ಕಾಲದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಗಳನ್ನು ಏರಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರ ದೇಶವಾಸಿಗಳ ಮೇಲೆ ಗದಾ ಪ್ರಹಾರ ಮಾಡುತ್ತಿದೆ ಎಂದು ದೂರಿದರು.

ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಮುಖಂಡ ನಾಗಪ್ಪಕೊಠಾರಿ, ಪಕ್ಷದ ಪ್ರಮುಖ ರಾದ ಉದಯ ಪೂಜಾರಿ ಚಿತ್ತೂರು, ಉದಯಕುಮಾರ ಶೆಟ್ಟಿ ನೆಂಪು, ಶರತ ಕುಮಾರ ಶೆಟ್ಟಿ ಕಟ್ಬೇಲ್ತೂರು, ಸದಾಶಿವ ಶೆಟ್ಟಿ ಶಂಕರನಾರಾಯಣ, ಕಿರಣ್ ಹೆಗ್ಡೆ ಅಂಪಾರು, ಯಾಸಿನ್ ಹೆಮ್ಮಾಡಿ ಮೊದಲಾದವರು ಉಪಸ್ಥಿತರಿದ್ದರು.

ಕೋಟ: ತೈಲ ಬೆಲೆ ಏರಿಕೆಯನ್ನು ಖಂಡಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿ ಯಿಂದ ಸಾಸ್ತಾನ ಪೇಟೆಯಿಂದ ಹೊರಟು ಪೆಟ್ರೋಲ್ ಬಂಕ್ ತನಕ ರಿಕ್ಷಾವನ್ನು ತಳ್ಳಿಕೊಂಡು ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪ್ರತಿಭಟನೆ ಮಾಡಲಾಯಿತು.

ಕೋಟ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಂಕರ್ ಕುಂದರ್, ಉಡುಪಿ ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ತಿಮ್ಮ ಪೂಜಾರಿ ಕೋಟ, ಶ್ರೀನಿವಾಸ್ ಅಮೀನ್, ಬಸವ ಪೂಜಾರಿ ಸಾಸ್ತಾನ, ರವೀಂದ್ರ ಕಾಮತ್ ಗುಂಡ್ಮಿ, ರೋಶನಿ ಒಲಿವೆರಾ, ನಟರಾಜ್ ಹೊಳ್ಳ, ಸುರೇಂದ್ರ ಅಡಿಗ ಬಾಳ್ಕುದ್ರು, ಮಂಜುನಾಥ ಗೋಳಿಬೆಟ್ಟು, ರಾಘವೇಂದ್ರ ವೈ ಬಿ, ಶಂಕರ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಾವರ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆಯನ್ನು ಖಂಡಿಸಿ ರವಿವಾರ ಉಪ್ಪೂರು ಪೆಟ್ರೋಲ್ ಬಂಕ್ ಬಳಿ ಪ್ರತಿಭಟನೆ ನಡೆಸ ಲಾಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತ ನಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ದಿನಕರ ಹೇರೂರು, ಕಾಂಗ್ರೆಸ್ ಮುಖಂಡರಾದ ಭುಜಂಗ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಡಾ.ಸುನೀತಾ ಶೆಟ್ಟಿ, ರಮೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News