×
Ad

ಮಂಗಳೂರು: ಮಂಗಳಮುಖಿಯರಿಗೆ ಕಿಟ್ ವಿತರಣೆ

Update: 2021-06-13 21:30 IST

ಮಂಗಳೂರು, ಜೂ.13: ಬೆಂಗಳೂರಿನ ಆಶ್ರಯ ಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಗರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ 115 ಮಂಗಳಮುಖಿಯರಿಗೆ ದಿನಸಿ ಕಿಟ್ ವಿತರಿಸಲಾಯಿತು.

ಲಾಕ್‌ಡೌನ್ ಅವಧಿಯಲ್ಲಿ ಬದುಕು ಸಾಗಿಸುವುದೇ ಸವಾಲಾಗಿತ್ತು. ಆದಾಯವಿಲ್ಲದೆ ದಿನ ದೂಡುವುದು ಕಷ್ಟವಾಗಿತ್ತು. ಇಂತಹ ಸಮಯದಲ್ಲಿ ಮಾನವೀಯ ಹೃದಯವುಳ್ಳ ದಾನಿಗಳ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ. ಇದೀಗ ದಿನಸಿ ಕಿಟ್ ಸಕಾಲಕ್ಕೆ ಲಭಿಸಿದೆ ಎಂದು ಮಂಗಳ ಮುಖಿಯರ ಪರವಾಗಿ ಬಾಲಕೃಷ್ಣ ಅಭಿಪ್ರಾಯಪಟ್ಟರು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಹನುಮಂತ ಕಾಮತ್, ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News