ಕಾರ್ಕಳ : ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

Update: 2021-06-13 16:28 GMT

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಹಿಂದುಳಿದ ವರ್ಗಗಳ ಘಟಕದ ವತಿಯಿಂದ  ತೈಲ ಬೆಲೆ ಏರಿಕೆ ವಿರೋಧಿಸಿ ಕೇಂದ್ರ  ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ  ನಡೆಯಿತು.

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಮಾತನಾಡಿ, ಲಾಕ್ ಡೌನ್ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತವಾಗಿ ಏರಿಸಿ ಶತಕವನ್ನು ದಾಟಿಸಿದ್ದಾರೆ.  ಇದು ಬಿಜೆಪಿ ಸರಕಾರದ ಸಾಧನೆಯ ಹೆಮ್ಮೆಯ ವಿಷಯವಾಗಿದೆ. ಅಚ್ಚೆ ದಿನ ಎಂದು ಜನರನ್ನು ತಿರಸ್ಕರಿಸಿದ ಮೋದಿ ಸರಕಾರ. ಮೊದಲೇ ಕರೋನ ದಿಂದ ಕಂಗೆಟ್ಟ ಮಧ್ಯಮ ಹಾಗೂ ಬಡವರ ಬದುಕಿನ ಮೇಲೆ ಬರೆ ಎಳೆದಂತಾಗಿದೆ. ಯು.ಪಿ . ಎ. ಸರಕಾರ ಅವಧಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಇದೀಗ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ ಸಂದರ್ಭದಲ್ಲಿ ಯಾಕೆ  ಮೌನವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ  ಮಾಜಿ ಸಚಿವ ಅಭಯಚಂದ್ರ ಜೈನ್ ಕಾರ್ಕಳ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ  ಕುಶ ಅರ್. ಮೂಲ್ಯ ,ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ನಯನ ಇನ್ನಾ, ಕಾರ್ಯದರ್ಶಿ ಪ್ರದೀಪ್ ಬೇಲಾಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಪ್ರೀತ್ ಶೆಟ್ಟಿ ಕೆದಿಂಜೆ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಶೇರಿ ಗಾರ್, ಕಾಂಗ್ರೆಸ್ ಪ್ರಮುಖರು , ಪ್ರತಿಭಟನೆ ಭಾಗವಹಿಸಿದ್ದರು. ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಕುಶ ಆರ್ .ಮೂಲ್ಯ ಸ್ವಾಗತಿಸಿ, ಶ್ರೀಧರ್ ಸನಿಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News