ವೈದ್ಯರ ಮೇಲೆ ಹಲ್ಲೆ ಆರೋಪ: ಓರ್ವನ ಬಂಧನ

Update: 2021-06-13 16:58 GMT

ಬೆಂಗಳೂರು, ಜೂ.13: ವೈದ್ಯರ ಮೇಲೆ ಹಲ್ಲೆ ಆರೋಪ ಸಂಬಂಧ ಓರ್ವನನ್ನು ಇಲ್ಲಿನ ಪುಟ್ಟೇನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತಂದೆಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ನಗರದ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ತದನಂತರ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಆದರೂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಜತೆಗೆ, ಶ್ವಾಸಕೋಶಕ್ಕೂ ಸೋಂಕು ತಗುಲಿದ ಹಿನ್ನೆಲೆ, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ ಎನ್ನಲಾಗಿದೆ.

ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ವೈದ್ಯ ಪದ್ಮನಾಭ್ ಹಾಗೂ ಸಿಬ್ಬಂದಿ ಮೇಲೆ ಜಗದೀಶ್ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎಂದು ನೀಡಿದ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News