ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯ ತಾಯಿ ನಿಧನ

Update: 2021-06-14 06:42 GMT

ಮೈಸೂರು, ಜೂ.14: ಸುತ್ತೂರು ಜಗದ್ಗುರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ತಾಯಿ ಶಿವನಾಗಮ್ಮ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವನಾಗಮ್ಮ (90) ವರ್ಷ ಸೋಮವಾರ ಬೆಳಗಿನ ಜಾವ ಅಸುನೀಗಿದ್ದಾರೆ.

ವಕೀಲರಾಗಿದ್ದ ದಿವಂಗತ ಎಸ್.ಎಂ. ಪ್ರಭುಸ್ವಾಮಿಯವರ ಪತ್ನಿಯಾಗಿದ್ದ ಇವರಿಗೆ ಸುತ್ತೂರು ಶ್ರೀಗಳು ಸೇರಿದಂತೆ ಎಸ್.ಪಿ.ಶಶಿಕಲಾ, ಐ‌ಎಎಸ್ ಅಧಿಕಾರಿ ಷಡಕ್ಷರಸ್ವಾಮಿ, ಜೆ.ಎಸ್.ಎಸ್. ಮಹಾವಿದ್ಯಾಪೀಠದ ಕಾರ್ಯದರ್ಶಿಗಳಾದ ಎಸ್.ಪಿ. ಮಂಜುನಾಥ್, ಪ್ರೊ. ಎಸ್.ಪಿ.ಉಮಾದೇವಿ, ಮತ್ತು ಉದಯ ಶಂಕರ್ ಸೇರಿದಂತೆ ಅಪಾರಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸುತ್ತೂರು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ನಿಧನಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

'ಮಹಾತಾಯಿ ಶ್ರೀಮತಿ ಶಿವನಾಗಮ್ಮ ಅವರ ಲಿಂಗೈಕ್ಯದಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮಾಧ್ಯಮ ಸಂದೇಶದಲ್ಲಿ ತಿಳಿಸಿದ್ದಾರೆ.

ಡಿಸಿಎಂ ಡಾ.ಅಶ್ವತ್ಥ್ ನಾರಾಯಣ, ಸಚಿವರಾದ ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಜಿ.ಟಿ.ದೇವೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News