×
Ad

150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಮಗು

Update: 2021-06-14 14:25 IST
photo: ANI

ಆಗ್ರಾ: ಇಲ್ಲಿನ ಧರಿಯೈ ಗ್ರಾಮದಲ್ಲಿ ಸೋಮವಾರ ಆಟವಾಡುತ್ತಿದ್ದಾಗ ಐದು ವರ್ಷದ ಮಗು 150 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ರಾ ಗ್ರಾಮೀಣ ಪ್ರದೇಶದ ಫತೇಹಾಬಾದ್‌ನ ನಿಬೋಹರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 8: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಇಲ್ಲಿಯವರೆಗೆ, ಮಗುವಿನ ಚಲನೆಯನ್ನು ಗಮನಿಸಲಾಗಿದ್ದು, ಮಗು ಪ್ರತಿಕ್ರಿಯಿಸುತ್ತಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ಸೂರಜ್ ಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.

ಕೊಳವೆ ಬಾವಿಯನ್ನು ಮಗುವಿನ ತಂದೆ ಚೋಟೆಲಾಲ್ ತೋಡಿಸಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News