×
Ad

ಬೈಕ್ ಅಪಘಾತ: ನಟ ಸಂಚಾರಿ ವಿಜಯ್ ಸ್ನೇಹಿತನ ವಿರುದ್ಧ ಎಫ್‌ಐಆರ್

Update: 2021-06-14 23:07 IST

ಬೆಂಗಳೂರು, ಜೂ.14: ಶನಿವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡು ಸಂಚಾರಿ ವಿಜಯ್ ಅವರ ಮಿದುಳು ನಿಷ್ಕ್ರಿಯವಾಗಿದ್ದು, ಹೃದಯ ಬಡಿತ ಜೀವಂತವಾಗಿದೆ. ಅವರನ್ನು ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಈ ನಡುವೆ ಬೈಕ್ ಅಪಘಾತಕ್ಕೆ ಸಂಬಂಧಿಸಿದಂತೆ ಸಂಚಾರಿ ವಿಜಯ್ ಅವರ ಸ್ನೇಹಿತ ಪಿ.ಎಸ್. ನವೀನ್ ವಿರುದ್ಧ ಜಯನಗರ ಸಂಚಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಜಯ್ ಅವರ ಸಹೋದರ ಸಿದ್ದೇಶ್ ಕುಮಾರ್ ಬೈಕ್ ಸವಾರನ ವಿರುದ್ಧ ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಅನ್ವಯ ನವೀನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಿಜಯ್‌ ಅವರ ಸಹೋದರ ಸಿದ್ದೇಶ್‌ ಕುಮಾರ್ ದೂರು ನೀಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಜೀವಕ್ಕೆ ಕುತ್ತು ತಂದ ಆರೋಪದಡಿ ನವೀನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ನವೀನ್ ಬೆನ್ನಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News