ಬ್ರಾಹ್ಮಣರ ಅವಹೇಳನ ಆರೋಪ: ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್ ಗೆ ನೋಟಿಸ್ ಜಾರಿ

Update: 2021-06-15 10:23 GMT

ಬೆಂಗಳೂರು, ಜೂ.15: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಸಿನಿಮಾ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ವಿರುದ್ಧ ಇಲ್ಲಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಚೇತನ್ ಅವರಿಗೆ ನೋಟಿಸ್ ನೀಡಲಾಗಿದೆ.

ಈ ಬಗ್ಗೆ ಫೇಸ್ಬುಕ್ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಚೇತನ್, ಬ್ರಾಹ್ಮಣ್ಯದ ವಿರುದ್ಧ ನನ್ನ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ ಪೋಸ್ಟ್‌ಗಳ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಇಂದು ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ ನನಗೆ ನೋಟಿಸ್ ಬಂದಿದೆ. ನಾಳೆ ಬೆಳಗ್ಗೆ ನಾನು ಪೊಲೀಸ್ ಠಾಣೆಗೆ ಹೋಗುತ್ತಿದ್ದೇನೆ. ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿ ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ನಟ ಚೇತನ್ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ವಿಪ್ರ ಯುವ ವೇದಿಕೆ ನೀಡಿದ ದೂರಿನ್ವಯ ಪೊಲೀಸರು ಎಫ್‍ಐಆರ್ ದಾಖಲು ಮಾಡಿದ್ದಾರೆ. ಭಾರತೀಯ ದಂಡ ಸಂಹಿತೆ ಸೆಕ್ಷನ್153(ಬಿ), ಸೆಕ್ಷನ್ 295(ಎ) (ಧಾರ್ಮಿಕ ಭಾವನೆ ಕೆರಳಿಸುವುದು) ಅಡಿ ಚೇತನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News