ಬೆಂಗಳೂರು ನಗರದಲ್ಲಿ ಜೂ.21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರಿಕೆ

Update: 2021-06-15 12:16 GMT

ಬೆಂಗಳೂರು, ಜೂ.15: ರಾಜಧಾನಿ ಬೆಂಗಳೂರು ನಗರದಲ್ಲಿ ಜೂ.21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರೆಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಿಸಿದ್ದಾರೆ.

ನಗರದಲ್ಲಿ ಒಂದೆಡೆ 4ಕ್ಕಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದ್ದು, ಬಸ್‍ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ತೆರಳುವವರಿಗೆ ವಿನಾಯಿತಿ ನೀಡಲಾಗಿದೆ.

ಜನತೆ ಗುಂಪಾಗಿ ಸೇರುವುದು ಮೆರವಣಿಗೆ ಪ್ರತಿಭಟನೆ ನಡೆಸುವುದು ಉತ್ಸವ ನಡೆಸುವುದನ್ನು ನಿಷೇಧಿಸಲಾಗಿದೆ. ಇನ್ನು, ಸೋಂಕು ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News