×
Ad

ಮತದಾರರಿಗೆ ಹಂಚಲು ಹಣ ಸಾಗಿಸುತ್ತಿದ್ದ ಆರೋಪ: ಶಾಸಕ ದುರ್ಯೋಧನ ಐಹೊಳೆ ವಿರುದ್ಧದ ಪ್ರಕರಣ ರದ್ದು

Update: 2021-06-15 18:54 IST

ಬೆಂಗಳೂರು, ಜೂ.15: ಕಳೆದ ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಹಂಚಲು ಅಕ್ರಮವಾಗಿ ಹಣ ಸಾಗಿಸಲಾಗುತ್ತಿದ್ದ ಆರೋಪದ ಮೇರೆಗೆ ರಾಯಬಾಗ್ ಶಾಸಕ ದುರ್ಯೋಧನ ಐಹೊಳೆ ಮತ್ತು ಇತರ ನಾಲ್ವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣದ ರದ್ದು ಕೋರಿ ಆನಂದ್ ಸಿದ್ರಾಮ್ ಅಕ್ಕಿಮರಡಿ ಹಾಗೂ ಇತರರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಎಫ್‍ಐಆರ್, ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಆದೇಶಿಸಿದೆ.

2018ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಪರ ಮತದಾರರಿಗೆ ಹಂಚಲು ಹಣ ಸಾಗಿಸಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಕಾರಿನಲ್ಲಿ 96 ಸಾವಿರ ರೂ.ನಗದು, ಬಿಜೆಪಿ ಕರಪತ್ರಗಳು ಸಿಕ್ಕಿದ್ದವು. ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News