ತೈಲ ಬೆಲೆ ಏರಿಕೆ ಖಂಡಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ, ಜೂ.15: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣ ದಲ್ಲಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ, ಬಿಜೆಪಿ ಪಕ್ಷವು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸಿ ಅತಂತ್ರರನ್ನಾಗಿಸಿದೆ. ಇಂಧನ ಬೆಲೆ ಗಗನಕ್ಕೇರಿದರೂ ಭಕ್ತರು ಇನ್ನೂ ಮೋದಿ ಭಜನೆಯಲ್ಲಿದ್ದಾರೆಂದು ಟೀಕಿಸಿದರು.
ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಕಾರ್ಯ ದರ್ಶಿ ಪ್ರಶಾಂತ್ ಜತ್ತನ್ನ, ಎಸ್‌ಸಿ ಘಟಕದ ಅಧ್ಯಕ್ಷ ಗಣೇಶ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕರ್ ಮಾತನಾಡಿದರು.
ರಾಜ್ಯ ಹಿಂದುಳಿದ ವರ್ಗದ ಘಟಕದ ಕಾರ್ಯದರ್ಶಿ ಯತೀಶ್ ಕರ್ಕೇರ, ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮದ್ ತೆಂಕನಿಡಿಯೂರು, ಸದಸ್ಯರಾದ ಶರತ್ ಶೆಟ್ಟಿ, ಕಡೆಕಾರು ಗ್ರಾಪಂ ಸದಸ್ಯರಾದ ತಾರಾನಾಥ ಸುವರ್ಣ, ಶೇಖರ ಶೆಟ್ಟಿ, ಸುದೇಶ್ ಶೇಟ್,ನವೀನ್ ಸುವರ್ಣ ಬನ್ನಂಜೆ, ಪ್ರಜ್ವಲ್ ಅಂಚನ್, ಪ್ರದೀಪ್ ಅಂಚನ್, ಗಣೇಶ್ ದೇವಾಡಿಗ, ಸಾಯಿರಾಜ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.