ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸಲು ತಂಡ ರಚನೆ
Update: 2021-06-15 21:15 IST
ಮಂಗಳೂರು, ಜೂ.15: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಶೇ.17ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದೆ. ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ಆ ಹಿನ್ನೆಲೆಯಲ್ಲಿ ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡವನ್ನು ರಚಿಸಲಾಗಿದೆ.
ಈ ತಂಡವು ಸೋಂಕಿನ ಲಕ್ಷಣಗಳುಳ್ಳ ವ್ಯಕ್ತಿಗಳ ಸ್ಥಳಕ್ಕೆ ತೆರಳಿ ಪರೀಕ್ಷೆ ಮಾಡುತ್ತಿದೆ. ಈ ವ್ಯವಸ್ಥೆಯನ್ನು ಸದುಪಯೋಗಪಡಿಸಲು ಪಾಲಿಕೆಯ ವತಿಯಿಂದ ಕೋವಿಡ್ ಪರೀಕ್ಷೆಗಾಗಿ ಸಂಪರ್ಕಿಸಿ ಎಂಬ ಪರಿಕಲ್ಪನೆಯಲ್ಲಿ ಪ್ರತ್ಯೇಕವಾದ ದೂ ಸಂ: 0824-2455674ನ್ನು ನಿಗದಿಪಡಿಸಿಕೊಂಡು ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಈ ಸಹಾಯವಾಣಿ ಕೇಂದ್ರವು ಪ್ರತಿ ದಿನ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯಚರಿಸಲಿದೆ ಎಂದು ಮಂಗಳೂರು ಮನಪಾ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.