ಬಂಟ್ವಾಳ: ಇಂಧನ ಬೆಲೆ ಏರಿಕೆ ಖಂಡಿಸಿ ಡಿವೈಎಫ್.ಐ ಪ್ರತಿಭಟನೆ

Update: 2021-06-15 15:57 GMT

ಬಂಟ್ವಾಳ, ಜೂ.15: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಮಂಗಳವಾರ ಡಿವೈಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಮಂಗಳಪದವು ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.(ಎಂ )ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ಮೋದಿ ಸರಕಾರ ಪೆಟ್ರೋಲ್ ದರ ಇಳಿಸದೆ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

ಅಚ್ಚೇ ದಿನದ ಹೆಸರಿನಲ್ಲಿ ಜನರ ಬದುಕನ್ನು ನಿರ್ನಾಮ ಮಾಡಲು ಹೊರಟ ಬಿಜೆಪಿ ಸರಕಾರದ ವಿರುದ್ಧ ಜನತೆ ದೊಡ್ಡ ಮಟ್ಟದ ಜನಾಂದೋಲನ ನಡೆಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆ ವೇಳೆ ಜೀಪ್ ಒಂದಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ಆರಂಭಿಸಲಾಯಿತು.

ಈ ವೇಳೆ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ, ರಿಕ್ಷಾ ಚಾಲಕರ ಸಂಘದ ಕಾರ್ಯದರ್ಶಿ ರಝಾಕ್ ಕೆಲಿಂಜ , ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ಮುಖಂಡರಾದ ಸಲೀಂ ಮಲಿಕ್, ಸಲ್ಮಾನ್ ಪಿ.ಬಿ,ಜಮೀಲ್, ಇರ್ಪಾನ್ ,ಇಬ್ರಾಹಿಂ ಭಾಸಿಂ ನೇತೃತ್ವ ವಹಿಸಿದ್ದರು. ಸುಲೈಮಾನ್ ಪೆಲತ್ತಡ್ಕ, ಹನೀಪ್ ಕೆಲಿಂಜ, ಹನೀಪ್ ಆಲಂಗಾರ್, ಸಮೀರ್ ಪಾತ್ರತೋಟ, ಸಾಭಿತ್ ಕೆಲಿಂಜ, ಅಝೀಝ್ ಕೆಳಿಂಜ, ಸಿನಾನ್, ಅಝೀಝ್ ಪೆಲತ್ತಡ್ಕ,‌ ಸವಾದ್ ಕೋಲ್ಪೆ, ಶಾಕೀರ್ ಖಾನ್, ಲಿಯಕತ್ ಖಾನ್, ಮೊಹಿದಿನ್ ಕೆದುಮೂಲೆ. ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News