ಬುಧವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮನ

Update: 2021-06-15 18:17 GMT

ಬೆಂಗಳೂರು, ಜೂ.15: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂ.16(ಬುಧವಾರ)ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದು. ಕುಮಾರಕೃಪಾ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದು. ಸಂಜೆ 5 ರಿಂದ 7 ಗಂಟೆಯವರೆಗೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಎಲ್ಲ ಸಚಿವರ ಜೊತೆ ಸಭೆ ನಡೆಸಲಿದ್ದು ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಜೂ.17ರಂದು ಬಿಜೆಪಿ ಕಚೇರಿಯಲ್ಲಿ ಬೆಳಗ್ಗೆ 9 ಗಂಟೆಯಿಂದ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದು. ಜೂ.18ರಂದು ಬೆಳಗ್ಗೆ 10.30 ರಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಪಕ್ಷದ ವಿವಿಧ ಮೋರ್ಚಾ ಅಧ್ಯಕ್ಷರ ಜೊತೆ ಸಭೆ ನಡೆಸಲಿದ್ದಾರೆ.

ಆನಂತರ ಸಂಜೆ 5 ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅರುಣ್ ಸಿಂಗ್, ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕೋರ್ ಕಮಿಟಿಯ ಇತರ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News