ಪುದು: ಇಂಧನ ತೈಲ ಬೆಲೆಯೇರಿಕೆ ಖಂಡಿಸಿ ಎಸ್ ಡಿಪಿಐ ಪ್ರತಿಭಟನೆ
Update: 2021-06-16 11:24 IST
ಫರಂಗಿಪೇಟೆ, ಜೂ.16: ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ತೈಲ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಇದರ ಪುದು ಗ್ರಾಮ ಸಮಿತಿಯ ವತಿಯಿಂದ ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಹಗ್ಗ ಕಟ್ಟಿ ಆಟೋ ರಿಕ್ಷಾವನ್ನು ಎಳೆದು, ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡು, ಭಿತ್ತಿಪತ್ರ ಪ್ರದರ್ಶನ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು ಮತ್ತು ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಎಸ್ ಡಿಪಿಐ ಪುದು ಗ್ರಾಮ ಸಮಿತಿಯ ಅಧ್ಯಕ್ಷ ಇಕ್ಬಾಲ್ ಅಮೆಮ್ಮಾರ್, ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಸುಲೈಮಾನ್ ಉಸ್ತಾದ್, ಪುದು ಗ್ರಾಪಂ ಸದಸ್ಯ ನಝೀರ್ ಕುಂಜತ್ಕಳ, ಮುಖಂಡರಾದ ಸಲೀಂ ಕುಂಪನಮಜಲ್, ಬಶೀರ್ ಅಮೆಮ್ಮಾರ್, ಗ್ರಾಮ ಸಮಿತಿಯ ಉಪಾಧ್ಯಕ್ಷ ಅಬ್ಬಾಸ್ ಪೇರಿಮಾರ್ ಮತ್ತಿತರರು ಉಪಸ್ಥಿತರಿದ್ದರು.