ಪುಂಜಾಲಕಟ್ಟೆ: ತೈಲ ಬೆಲೆಯೇರಿಕೆ ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

Update: 2021-06-16 06:26 GMT

ಪುಂಜಾಲಕಟ್ಟೆ, ಜೂ.16: ದಿನಂದಿಂದ ದಿನಕ್ಕೆ ಇಂಧನ ತೈಲ ಬೆಲೆಯೇರಿಕೆಯಾಗಿ ಇದೀಗ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ವತಿಯಿಂದ ಪುಂಜಾಲಕಟ್ಟೆ ಪೆಟ್ರೋಲ್ ಬಂಕ್ ಎದುರುಗಡೆ ವ್ಯಾನಿಗೆ ಹಗ್ಗ ಕಟ್ಟಿ ಎಳೆದು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಹನೀಫ್ ಪುಂಜಾಲಕಟ್ಟೆ, ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಸಮಿತಿಯ ಸದಸ್ಯ ಅಶ್ಫಾಕ್ ಪುಂಜಾಲಕಟ್ಟೆ, ಬ್ರಾಂಚ್ ಕಾರ್ಯದರ್ಶಿ ಮಜೀದ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News