2020-21ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Update: 2021-06-16 13:27 GMT

ಬೆಂಗಳೂರು, ಜೂ.16: ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎಸೆಸೆಲ್ಸಿ ಪರೀಕ್ಷೆಯನ್ನು ಎರಡು ದಿನಕ್ಕೆ ಸೀಮಿತಗೊಳಿಸಿ ಪ್ರಶ್ನೆ ಪತ್ರಿಕೆಯ ವಿಧಾನವನ್ನು ಬದಲಾಯಿಸಿರುವ ಶಿಕ್ಷಣ ಇಲಾಖೆ, 2020-21ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟಿಸಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯ ಪರೀಕ್ಷಾ ಮಂಡಳಿಯ ವೆಬ್‍ಸೈಟ್ www.sslc.karnataka.gov.in ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ. ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆ ಪ್ರಕಟವಾಗಿದೆ.

ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಗಳು ಲಭ್ಯವಾಗಿದ್ದು, ಉತ್ತರವನ್ನು ಒಎಂಆರ್ ಶೀಟ್‍ನಲ್ಲಿ ನಮೂದಿಸಬೇಕು. ಪ್ರತೀ ವಿಷಯಕ್ಕೆ ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆ ಪತ್ರಿಕೆಯಾಗಿದ್ದು, ಉತ್ತರಿಸಲು 3 ಗಂಟೆ ಕಾಲಾವಧಿಯ ಇರುತ್ತದೆ.

ಉತ್ತರಗಳನ್ನು ಒಎಂಆರ್ ಶೀಟ್‍ನಲ್ಲಿ ನಮೂದಿಸಬೇಕು. ಒಎಂಆರ್ ಶೀಟ್ ಮಾದರಿಯೂ ಸಹ ಪ್ರಕಟಿಸಲಾಗಿದೆ. ಇನ್ನೆರಡು ದಿನದಲ್ಲಿ ಭಾಷಾ ವಿಷಯಗಳ(ಮೂರು ವಿಷಯ) ಪ್ರಶ್ನೆಪತ್ರಿಕೆ ಪ್ರಕಟವಾಗುತ್ತೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಯನ್ನು ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿ ಅಭ್ಯಾಸ ಮಾಡಲು ಸೂಚಿಸಲಾಗಿದೆ ಹಾಗೂ ಶಿಕ್ಷಕರಿಗೂ ಈ ಕುರಿತು ಕಾರ್ಯ ಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News