​ಪಣಿಯಾಡಿ ದೇವಸ್ಥಾನದ ಬ್ರಹ್ಮಕಲಶ ಸಂಪನ್ನ

Update: 2021-06-16 13:49 GMT

ಉಡುಪಿ, ಜೂ.16: ಉಡುಪಿ ಪುತ್ತಿಗೆ ಮಠದ ಆಡಳಿತದ ಇತಿಹಾಸ ಪ್ರಸಿದ್ಧ ಪಣಿಯಾಡಿಯ ಶ್ರೀಅನಂತಪದ್ಮನಾಭ ದೇವಾಲಯ ನವೀಕರಣದ ಪ್ರಥಮ ಹಂತದ ಶಿಲಾಮಯ ಗರ್ಭಗೃಹ ಹಾಗೂ ಶಿಲಾಮಯ ತೀರ್ಥಮಂಟಪ ಸಮರ್ಪಣೆ, ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶ ಅಭಿಷೇಕವು ಸಂಪನ್ನಗೊಂಡಿತು.

ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ವೇ. ಮೂ. ಪುತ್ತೂರು ಹಯವದನ ತಂತ್ರಿ ಹಾಗೂ ಪಂಜ ಭಾಸ್ಕರ ಭಟ್ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಸರಳವಾಗಿ ನಡೆದು ಸಂಪನ್ನ ಗೊಂಡಿತು.

ಇದೇ ವೇಳೆ ಎರಡನೇ ಹಂತದ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಕೋವಿಡ್-19ರ ಮಾರ್ಗಸೂಚಿಯಂತೆ ಕಾರ್ಯಕ್ರಮಗಳನ್ನು ಶಾಸ್ತ್ರೀಯವಾಗಿ ಹಾಗೂ ಸರಳವಾಗಿ ಆಚರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News