ರಸ್ತೆ, ಫುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸಿದರೆ ದಂಡ: ಸುತ್ತೋಲೆ ಹೊರಡಿಸಿದ ಗೃಹ ಇಲಾಖೆ

Update: 2021-06-16 14:08 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.16: ರಸ್ತೆ ಮತ್ತು ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡಿದರೆ ದಂಡ ಕಟ್ಟಬೇಕು ಎಂದು ಗೃಹ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೋಟಾರು ವಾಹನ ನಿಯಮ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಎಲ್ಲ ಕಮಿಷನರ್, ಎಸ್‌ಪಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ದಂಡ ವಿಧಿಸುವ ಕುರಿತು ನಿರ್ದೇಶನ ನೀಡಲಾಗಿದೆ.

ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡುವವರಿಗೆ 500 ರಿಂದ 1 ಸಾವಿರದ ತನಕ ದಂಡ ಹಾಕಲಾಗುತ್ತದೆ. ರಸ್ತೆಯಲ್ಲಿ ವಾಹನ ನಿಲ್ಲಿಸಿ ಸಂಚಾರಕ್ಕೆ ತೊಂದರೆ ಮಾಡಿದರೆ ಪ್ರತಿ ಗಂಟೆಗೆ 50 ರೂ.ರಂತೆ ದಂಡ ವಿಧಿಸಬೇಕು.

ಕರ್ನಾಟಕ ಹೈಕೋರ್ಟ್ ಆದೇಶದ ಅನ್ವಯ ಗೃಹ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ. ಪಾದಚಾರಿ ಮಾರ್ಗಗಳ ಅತಿಕ್ರಮಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ದಂಡ ವಿಧಿಸುವಂತೆ ಆದೇಶ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News