ಕಾಸರಗೋಡು : ನೀಲೇಶ್ವರದಲ್ಲಿ ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ
Update: 2021-06-17 12:01 IST
ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ನೀಲೇಶ್ವರದಲ್ಲಿ ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.
ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಕರುವಚ್ಚೇರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅನಿಲ ಸೋರಿಕೆಯಾಗದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ಮಂಗಳೂರಿನ ತೈಲ ಕಂಪೆನಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಅನಿಲವನ್ನು ಇನ್ನೊಂದು ಟ್ಯಾಂಕರ್ ಗೆ ತುಂಬಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಚಾಲಕರಾದ ತಮಿಳುನಾಡು ಮೂಲದ ಪಾಂಡಿ ಮತ್ತು ಇನ್ನೋರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.