ಬಂಟ್ವಾಳ : ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಲಾರಿ, ಇಬ್ಬರಿಗೆ ಗಾಯ
Update: 2021-06-17 12:50 IST
ಬಂಟ್ವಾಳ, ಜೂ.17: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದಲ್ಲಿ ಗುರುವಾರ ನಡೆದಿದೆ.
ಶಿವಮೊಗ್ಗ ಜಿಲ್ಲೆಯಿಂದ ಪುತ್ತೂರಿಗೆ ಅಕ್ಕಿ ಚೀಲಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬಂಟ್ವಾಳ ಎಸ್.ವಿ.ಎಸ್. ವಿದ್ಯಾಗಿರಿ ಶಾಲೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಢಿಕ್ಕಿಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲಾರಿ ಚಾಲಕ ಹಾಗೂ ನಿರ್ವಾಹಕನಿಗೆ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.