ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Update: 2021-06-17 12:16 GMT

ಉಡುಪಿ, ಜೂ.17: ಇದೇ ಜೂ.21ರಂದು ಏಳನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಕೋವಿಡ್- 19 ಕಾರಣದಿಂದ ಸಾರ್ವಜನಿಕ ಸಭೆ, ಸಮಾರಂಭ, ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಷೇಧಿಸಿರುವುದರಿಂದ ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ದಿನಾಚರಣೆಯನ್ನು ಆಚರಿಸಲು ಸರಕಾರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೋವಿಡ್ ಸೋಂಕಿತರ ಚೇತರಿಕೆಗೆ ಅನುಕೂಲವಾಗುವ ಪ್ರಾಣಾಯಾಮ, ಉಸಿರಾಟ ಕ್ರಿಯೆಗಳ ವ್ಯಾಯಾಮ ಅಭ್ಯಾಸಗಳನ್ನು ಕೋವಿಡ್ ಕೇರ್ ಸೆಂಟರ್ ಹಾಗೂ ಆಯ್ದ ಗ್ರಾಮಗಳ ಕೋವಿಡ್ ಸೋಂಕಿತರಿಗೆ ಮಾಡಿಸುವ ಮೂಲಕ ಅವರ ದೈಹಿಕ ಹಾಗೂ ಮನೋಸ್ಥೈರ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಕಾರ್ಯಪ್ರವೃತ್ತವಾಗಿದೆ.

ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಆಯುಷ್ ಮಂತ್ರಾಲಯ ನೀಡಿರುವ ಮಾರ್ಗಸೂಚಿಯಂತೆ ಪ್ರಸಕ್ತ ಸಾಲಿನ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಾರ್ವಜನಿಕರು, ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಯೋಗಾಸನಗಳನ್ನು ಮಾಡುವುದರೊಂದಿಗೆ ಇದರ ಫೋಟೋ ಗಳನ್ನು ಜಿಲ್ಲಾ ಆಯುಷ್ ಕಚೇರಿಗೆ daoudupi09@gmail.com ಮೇಲ್ ಅಥವಾ ವಾಟ್ಸ್‌ಆಪ್ (8217095386) ಮಾಡಿದಲ್ಲಿ ಆಯ್ದ ಫೋಟೋಗಳನ್ನು ಸಂಬಂಧಿತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News