ದ.ಕ. ಜಿಲ್ಲೆ: ಕೊರೋನ ಸೋಂಕಿಗೆ 11 ಬಲಿ; 679 ಮಂದಿಗೆ ಪಾಸಿಟಿವ್

Update: 2021-06-17 16:20 GMT

ಮಂಗಳೂರು, ಜೂ.17: ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಹೇರಿ ಎರಡು ತಿಂಗಳಾಗುತ್ತಾ ಬಂದಿದ್ದರೂ ಕೂಡ ಸೋಂಕಿತರ ಮತ್ತು ಸಾವಿಗೀಡಾಗುವವರ ಸಂಖ್ಯೆಯಲ್ಲಿ ಇಳಿಮುಖ ಕಂಡು ಬರುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,009ಕ್ಕೇರಿದೆ. ಅಲ್ಲದೆ ಗುರುವಾರ ಜಿಲ್ಲೆಯಲ್ಲಿ 679 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7.17ಕ್ಕೇರಿದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 86,344ಕ್ಕೇರಿದೆ.

ಗುರುವಾರ 657 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 78,730ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 6,605 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 9,33,125 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 8,46,781 ಮಂದಿಯ ವರದಿ ನೆಗೆಟಿವ್ ಬಂದಿದೆ.

ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 70,541 ಮಂದಿಯಿಂದ 85,31,217 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News