ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2021-06-17 16:04 GMT

ಬೆಂಗಳೂರು, ಜೂ.17: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೋಗದ ನಿಯಂತ್ರಣಕ್ಕೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಕೋವಿಡ್ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ. 

ರಾಜ್ಯದಲ್ಲಿ ಒಟ್ಟು 2,817 ಬ್ಲ್ಯಾಕ್ ಫಂಗಸ್ ಕೇಸ್‍ಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹೀಗಾಗಿ, ಫಂಗಸ್ ಚಿಕಿತ್ಸೆಗೆ ಬೆಡ್ ಮೀಸಲಿಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ನ್ಯಾಯಪೀಠವು ಸರಕಾರಕ್ಕೆ ಸೂಚನೆ ನೀಡಿದೆ.

ಈ ರೋಗವನ್ನು ನಿಯಂತ್ರಣ ಮಾಡಲು ರಾಜ್ಯ ಸರಕಾರ ಮತ್ತು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು. ಕೋವಿಡ್ ಪಾಸಿಟಿವ್ ಬಂದವರಿಗೆ ಈ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಈ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮುಂದಿನ ವಿಚಾರಣೆ ವೇಳೆ ಹೈಕೋರ್ಟ್‍ಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News