×
Ad

ಅಂಚೆ ಜೀವವಿಮಾ ಪ್ರೀಮಿಯಮ್ ಸಂಗ್ರಹಣೆಯಲ್ಲಿ ಪ್ರಥಮ

Update: 2021-06-17 21:43 IST

ಉಡುಪಿ, ಜೂ.17: ಉಡುಪಿ ಅಂಚೆ ವಿಭಾಗದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಪೂರ್ಣಿಮಾ ಜನಾರ್ದನ್ ಉಡುಪಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮಾ ಪ್ರೀಮಿಯಮ್ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಉಡುಪಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮಾ ಪ್ರೀಮಿಯಮ್ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಪ್ರೀಮಿಯಂ ಸಂಗ್ರಹಣೆಯಲ್ಲಿ ದ್ವಿತೀಯ ಸ್ಥಾನ ಪಡೆದ ಉಡುಪಿ ಅಂಚೆ ವಿಭಾಗದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಪೂರ್ಣಿಮಾ ಜನಾರ್ದನ್ ಅವರನ್ನು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್ ಚಂದರ್ ಗೌರವಿಸಿದರು.

ಈ ಸಂದರ್ಭದಲ್ಲಿ ಉಡುಪಿ ಅಂಚೆ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ, ಅಂಚೆ ವಿಭಾಗದ ಉಡುಪಿ ಕಚೇರಿ ಸಹಾಯಕ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News