ಜೂ.19: ನೇರ ಸಂದರ್ಶನ

Update: 2021-06-17 16:27 GMT

ಮಂಗಳೂರು, ಜೂ.17: ದ.ಕ.ಜಿಲ್ಲಾದ್ಯಂತ ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ DCH (Dedicated covid hospital)  ಆಗಿ ಕಾರ್ಯ ನಿರ್ವಹಿಸುತ್ತಿರುವ ವೆನ್ಲಾಕ್‌ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಜೂ.19ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.

ಸೆಪ್ಟೆಂಬರ್ 30ರವರೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಅಂದು ವೆನ್ಲಾಕ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರನ್ನು ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಶುಶ್ರೂಷಕಿ ಒಟ್ಟು ಹುದ್ದೆಯ ಸಂಖ್ಯೆ 8 ಆಗಿದ್ದು, ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News