ಉ.ಕ ಜಿಲ್ಲೆಯ ಪತ್ರಕರ್ತರಿಗೆ ಆರೋಗ್ಯ ಕಿಟ್ ವಿತರಣೆ

Update: 2021-06-17 17:05 GMT

ಭಟ್ಕಳ: ಮಾಜಿ ಸಚಿವರು ಹಳಿಯಾಳ ಕ್ಷೇತ್ರದ ಶಾಸಕರೂ ಆಗಿರುವ ಆರ್.ವಿ.ದೇಶಪಾಂಡೆಯವರು ಉ.ಕ ಜಿಲ್ಲೆಯ ಸುಮಾರು 250 ಪತ್ರಕರ್ತರಿಗೆ ಆರೋಗ್ಯ ಕಿಟ್ ವಿತರಣೆ ಮಾಡಿದ್ದು, ಗುರುವಾರ ಭಟ್ಕಳದ ಕಾಂಗ್ರೆಸ್ ಕಾರ್ಯಲಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ನಾಯ್ಕ ಭಟ್ಕಳದ ಪತ್ರಕರ್ತರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದು ರಾಷ್ಟ್ರೀಯ ವಿಪತ್ತು ನಿರ್ವಾಹಣ ಕಾಯ್ದೆಯಡಿ ಯಾರಾದರೂ ಮರಣಹೊಂದಿದರೆ ಒಬ್ಬ ವ್ಯಕ್ತಿಗೆ ನಾಲ್ಕು ಲಕ್ಷ ರೂ ಪಾರಿಹಾರ ನೀಡಬೇಕು ಎಂದಿದ್ದು ಮೋದಿ ಸರ್ಕಾರವು ಒಂದು ಲಕ್ಷಕ್ಕೆ ಇಳಿಸಿದ್ದು ಅದರ ಪರಿಹಾರದ ಘೋಷಣೆಯು ಮಾಡಿಲ್ಲ ಎಂದು ಆರೋಪಿಸಿರುವ ಅವರು ರಾಜ್ಯ ಸರ್ಕಾರ ಕೋವಿಡ್ ಸಾವಿನ ಅಂಕಿಸಂಖ್ಯೆಗಳನ್ನು ತಪ್ಪಾಗಿ ನೀಡಿದ್ದು ಕೋವಿಡ್ ನಿಂದ ಮರಣ ಹೊಂದಿದ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಕ್ಕೆ ಕನಿಷ್ಠ ನಾಲ್ಕು ಲಕ್ಷ ರೂ. ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಉ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿದರು.

ಪತ್ರಕರ್ತರ ಸಂಘದಿಂದ ಅಭಿನಂದನೆ

ಮಾಜಿ ಸಚಿವ ಆರ್.ವಿ ದೇಶಪಾಂಡೆಯವರು ಪತ್ರಕರ್ತರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರಿಗೆ ಆರೋಗ್ಯ ಕಿಟ್ ವಿತರಣೆ ಮಾಡಿದ್ದು ಜಿಲ್ಲೆಯ ಎಲ್ಲ ಪತ್ರಕರ್ತರ ಪರವಾಗಿ ಪತ್ರಕರ್ತರ ಸಂಘ ಕೃತಜ್ಞತೆ ಹಾಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News