ದ್ವಿತೀಯ ಪಿಯುಸಿ ಪುನರಾವರ್ತಿತರ ಪರೀಕ್ಷೆ ರದ್ದತಿ ಬಗ್ಗೆ ಪರಿಶೀಲನೆಗೆ ಸಮಿತಿ ರಚನೆ

Update: 2021-06-17 18:17 GMT

ಬೆಂಗಳೂರು, ಜೂ.17: ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ರದ್ದು ಮಾಡುವುದು ಸಮಂಜಸವೇ ಎಂಬ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದೆಂದು ಪಿಯು ಇಲಾಖೆ ನಿರ್ದೇಶಕಿ ಆರ್.ಸ್ನೇಹಲ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ಹೊಸ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆ ರದ್ದುಪಡಿಸಲಾಗಿದೆ. ಆದರೆ, ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡಿದ್ದ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಪುನರಾವರ್ತಿತರಿಗೂ ಪರೀಕ್ಷೆ ರದ್ದು ಮಾಡಬಹುದೆ ಎಂದು ಪರಿಶೀಲಿಸಲು ನ್ಯಾಯಾಲಯ ನಿರ್ದೇಶನ ನೀಡಿದೆ. ಅದರಂತೆ ಈ ಮೇಲಿನ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News