ಸಿಎಂ ಬದಲಾವಣೆ ಮಾಡುವುದಾದರೆ ಉತ್ತರ ಕರ್ನಾಟಕದಲ್ಲಿ ಸಮರ್ಥ ನಾಯಕರಿದ್ದಾರೆ: ಜಯಮೃತ್ಯುಂಜಯ ಸ್ವಾಮೀಜಿ

Update: 2021-06-18 07:15 GMT
ಗುರುವಾರ ರಾತ್ರಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರನ್ನು ಭೇಟಿಯಾದ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು, ಜೂ.18: ನಾವು ಮುಖ್ಯಮಂತ್ರಿ ಬದಲಾವಣೆ ಮಾಡಬೇಕೆಂದು ಒತ್ತಡ ಹೇರಲು ಆಗುವುದಿಲ್ಲ. ಬದಲಾವಣೆ ಮಾಡುವ ಅಧಿಕಾರ ನಮಗೆ ಇಲ್ಲ. ನಾವು ಕೇಂದ್ರದ ಬಿಜೆಪಿ ನಾಯಕರಿಗೆ ಸಲಹೆ ಕೊಡಬಹುದಷ್ಟೆ ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಒತ್ತಾಯ ಮಾಡುವುದಿಲ್ಲ. ಆದರೆ ರಾಜ್ಯದಲ್ಲಿ ಕೆಲ ನಾಯಕರಿಂದಲೇ ಇಂತಹ ಹೇಳಿಕೆ ಬರುತ್ತಿದೆ. ಹಾಗಾಗಿ ಸುಮ್ಮನೆ ಇರಲು ಸಾಧ್ಯವಿಲ್ಲ. ಒಂದು ವೇಳೆ ವರಿಷ್ಠರು ಸಿಎಂ ಬದಲಾವಣೆ ಮಾಡುವುದಾದರೆ ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದವರಿಗೇ ಪ್ರಾತಿನಿಧ್ಯ ನೀಡಲಿ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪನವರಗೆ ಪರ್ಯಾಯ ನಾಯಕರಿಲ್ಲ ಎಂದು ಬಿಂಬಿಸುವುದು ಬೇಡ. ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಸಮರ್ಥ ನಾಯಕರು ತುಂಬಿ ತುಳುಕುತ್ತಿದ್ದಾರೆ ಎಂದರು.

ಸಿಎಂ ಬದಲಾವಣೆ ಮಾಡುವುದಿದ್ದರೆ ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದವರಿಗೇ ಪ್ರಾತಿನಿಧ್ಯ ನೀಡಲಿ. ನಾನು ಲಿಂಗಾಯತ ಸಮುದಾಯದ ಪ್ರಾತಿನಿಧ್ಯ ವಹಿಸುತ್ತಿರುವುದರಿಂದ, ನಮ್ಮ ಸಮುದಾಯದವರಿಗೆ ಪ್ರಾತಿನಿಧ್ಯ ಸಿಗಲಿ ಎಂದು ಹೇಳುತ್ತೇನೆ. ಅದು ಬಿಟ್ಟರೆ ನಾನು ಸಿಎಂ ಬದಲಾವಣೆಗೆ ಒತ್ತಾಯ ಮಾಡುವುದಿಲ್ಲ, ಅವರಿಗೆ ಸಲಹೆ ಮಾತ್ರ ನೀಡಬಹುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News