ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಪೇಟೆಗೆ ಆಗಮಿಸುವ ಜನರ ಕೋವಿಡ್ ಪರೀಕ್ಷೆ

Update: 2021-06-18 06:40 GMT

ಬಂಟ್ವಾಳ, ಜೂ.18: ವಿಟ್ಲ ಪಟ್ಟಣ ಪಂಚಾಯತ್ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಎರಡನೇ ದಿನ  ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು ಶುಕ್ರವಾರ ಒಟ್ಟು 132  ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ವಿಟ್ಲ ಪಟ್ಟಣ ಪಂಚಾಯತ್ ಕೊರೋನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೋನ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು, ಪಟ್ಟಣ ಪಂಚಾಯತ್ ಸಿಬ್ಬಂದಿಗಳು, ವಿಟ್ಲ ಪೊಲೀಸರು ಜಂಟಿಯಾಗಿ ನಾಕಾಬಂಧಿ ಅಳವಡಿಸಿದ್ದಾರೆ.

ವಿಟ್ಲ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ನಾಡಕಚೇರಿ, ಮೇಗಿನಪೇಟೆ ಮೂರು ಕಡೆಗಳಲ್ಲಿ ವಿಟ್ಲ ಸಮುದಾಯ ಆರೋಗ್ಯದ ಕೇಂದ್ರದ ಮತ್ತು ಅಳಿಕೆಯ ಸಿಬ್ಬಂದಿಗಳು ಕೋವಿಡ್ ಪರೀಕ್ಷೆ ನಡೆಸಿದರು. ಗುರುವಾರ 80 ಮಂದಿಯನ್ನು ಇಂದು 132 ಮಂದಿ ಸೇರಿದಂತೆ ಒಟ್ಟು 212 ಮಂದಿಯ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿದೆ. ಫಲಿತಾಂಶ ನಿರೀಕ್ಷಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News