ಮೂವರು ವಿದ್ಯಾರ್ಥಿ ಕಾರ್ಯಕರ್ತರಿಗೆ ಜಾಮೀನು ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Update: 2021-06-18 08:24 GMT

ಹೊಸದಿಲ್ಲಿ: ಮೂವರು ವಿದ್ಯಾರ್ಥಿ ಕಾರ್ಯಕರ್ತರಾದ ನತಾಶಾ ನರ್ವಾಲ್, ದೇವಾಂಗನಾ ಹಾಗೂ ಆಸಿಫ್‌ ಇಕ್ಬಾಲ್‌ ರಿಗೆ ದಿಲ್ಲಿ ಹೈಕೋರ್‌ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದೆ. ಅವರು ಜಾಮೀನಿನ ಮುಖಾಂತರ ಜೈಲಿನಿಂದ ಹೊರಗುಳಿಯಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. 

ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪಿತೂರಿ ಆರೋಪ ಹೊರಿಸಿರುವ ಮೂವರು ಕಾರ್ಯಕರ್ತರಿಗೆ ಜಾಮೀನು ನೀಡುವ ಹೈಕೋರ್ಟ್ ತೀರ್ಪನ್ನು ಮುಂದಿನ ಪ್ರಕರಣಗಳಿಗೆ ಪೂರ್ವನಿದರ್ಶನವಾಗಿ ಬಳಸಲಾಗುವುದಿಲ್ಲ ಎಂದು ಅದು ಹೇಳಿದೆ.

ಹೈಕೋರ್ಟ್ ತೀರ್ಪಿನ ಕಾನೂನು ಅಂಶಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಧೀಶರು ಹೇಳಿದರು.

ಜಾಮೀನು ಆದೇಶವನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News