ಲಾಕ್‌ಡೌನ್ ಉಲ್ಲಂಘಿಸಿ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Update: 2021-06-18 11:08 GMT

ಬೆಂಗಳೂರು, ಜೂ.18: ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಬೆಂಗಳೂರಿನ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಿಸಲಾಗಿದೆ. 

ಆರ್‌ಟಿಐ ಕಾರ್ಯಕರ್ತ ವಿಜಯ್ ಡೆನ್ನಿಸ್ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ತೇಜಸ್ವಿ ಸೂರ್ಯ ಅವರ ವಿರುದ್ಧ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ. 

ಕೊರೋನ ವೈರಸ್ ಹಿನ್ನೆಲೆ ರಾಜ್ಯದಲ್ಲಿ ಲಾಕ್‌ಡೌನ್ ಹೇರಲಾಗಿದ್ದು, ರಾಜ್ಯ ಸರ್ಕಾರ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಿದೆ. ಆದರೆ ನೃಪತುಂಗ ರಸ್ತೆಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕ ವಿಜಯ್ ಪ್ರಕಾಶ್ ಅವರು ಊಟ ಮಾಡುವ ಮೂಲಕ ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಎನ್ಡಿಎಂಸಿ ಹಾಗೂ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News