ಬಂಧಿತ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ತಾಯಿ ನಿಧನ

Update: 2021-06-18 14:04 GMT
Photo: Indianexpress

ಕೊಚ್ಚಿ: ಹತ್ರಸ್‌ ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವನ್ನು ವರದಿ ಮಾಡಲು ತೆರಳುತ್ತಿದ್ದ ವೇಳೆ ಉತ್ತರಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಿದ್ದೀಕ್‌ ಕಪ್ಪನ್‌ ರ ತಾಯಿ ಖದೀಜಾ ಕುಟ್ಟಿ ಶುಕ್ರವಾರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು indianexpress.com ವರದಿ ಮಾಡಿದೆ.

ಫೆಬ್ರವರಿಯಲ್ಲಿ ಕಪ್ಪನ್‌ ರಿಗೆ ತಮ್ಮ ತಾಯಿ ಖದೀಜಾರನ್ನು ಭೇಟಿಯಾಗಲು ಸುಪ್ರೀಂ ಕೋರ್ಟ್ ಅವಕಾಶ ನೀಡಿತ್ತು. ಸಿದ್ದೀಕ್‌ ಕಪ್ಪನ್‌ ರವರ ತಾಯಿಗೆ 90 ವರ್ಷ ವಯಸ್ಸಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯಪೀಡಿತರಾಗಿದ್ದರು. ಅವರ ಅಂತ್ಯ ಸಂಸ್ಕಾರವು ಇಂದು ನಡೆಯಲಿದ್ದು, ಸಿದ್ದೀಕ್‌ ಕಪ್ಪನ್‌ ರವರಿಗೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. 

ಸಿದ್ದೀಕ್‌ ಕಪ್ಪನ್‌ ಸೇರಿದಂತೆ ಮೂವರು ಪಿಎಫ್‌ಐ ಕಾರ್ಯಕರ್ತರನ್ನು ಹತ್ರಸ್‌ ನಲ್ಲಿನ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ವರದಿ ಮಾಡಲು ತೆರಳುತ್ತಿದ್ದ ವೇಳೆ ಬಂಧಿಸಲಾಗಿತ್ತು. ಮಂಗಳವಾರ, ಮಥುರಾದ ಸ್ಥಳೀಯ ನ್ಯಾಯಾಲಯವು ಈ ನಾಲ್ವರ ವಿರುದ್ಧದ ವಿಚಾರಣೆಯನ್ನು ಕೈಬಿಟ್ಟಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News