×
Ad

ದ.ಕ.ಜಿಲ್ಲೆ: ಬ್ಲ್ಯಾಕ್ ಫಂಗಸ್ 2 ಪ್ರಕರಣ ಪತ್ತೆ

Update: 2021-06-18 19:10 IST

ಮಂಗಳೂರು, ಜೂ.18: ದ.ಕ. ಜಿಲ್ಲೆಯಲ್ಲಿ ಶುಕ್ರವಾರ  ಬ್ಲ್ಯಾಕ್ ಫಂಗಸ್ ನ ಎರಡು ಪ್ರಕರಣಗಳು ಪತ್ತೆಯಾಗಿವೆ. ಈ ಎರಡೂ ಪ್ರಕರಣಗಳು ದ.ಕ. ಜಿಲ್ಲೆಗೆ ಸಂಬಂಧಿಸಿದ್ದಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಸದ್ಯ 39 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳು ಇದೆ. ಇದರಲ್ಲಿ ದ.ಕ.ಜಿಲ್ಲೆಯ 10 ಮತ್ತು ಹೊರ ಜಿಲ್ಲೆಯ 29 ಪ್ರಕರಣಗಳು ಸೇರಿವೆ. ಶುಕ್ರವಾರ ಚಿಕಿತ್ಸೆ ಪಡೆದು ಗುಣಮುಖರಾದ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಈವರೆಗೆ ಗುಣಮುಖರಾಗಿ ಮನೆಗೆ ಮರಳಿದವರ ಸಂಖ್ಯೆ 26ಕ್ಕೇರಿದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ  ಬ್ಲ್ಯಾಕ್ ಫಂಗಸ್ ಗೆ 16 ಮಂದಿ ಬಲಿಯಾಗಿದ್ದಾರೆ. ಅದರಲ್ಲಿ ದ.ಕ.ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ 14 ಮಂದಿ ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News