ದ.ಕ. ಜಿಲ್ಲೆ : ಕೋವಿಡ್‌ಗೆ 15 ಬಲಿ; 1,006 ಮಂದಿಗೆ ಕೊರೋನ ಪಾಸಿಟಿವ್

Update: 2021-06-18 14:04 GMT

ಮಂಗಳೂರು, ಜೂ.18: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 15 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,024ಕ್ಕೇರಿದೆ. ಅಲ್ಲದೆ ಶುಕ್ರವಾರ ಜಿಲ್ಲೆಯಲ್ಲಿ 1,006 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.10.07ಕ್ಕೇರಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 87,350ಕ್ಕೇರಿದೆ. ಶುಕ್ರವಾರ 665 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 6,931 ಸಕ್ರಿಯ ಪ್ರಕರಣವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News