ಮೈಸೂರು: ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ ಮಗಳನ್ನು ಕೊಚ್ಚಿ ಕೊಲೆಗೈದ ತಂದೆ

Update: 2021-06-18 14:58 GMT
ಗಾಯತ್ರಿ

ಮೈಸೂರು,ಜೂ.18: ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಪಟ್ಟಣದ ಮಹದೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆ ಬಳಿ ನಡೆದಿದೆ.

ಗಾಯತ್ರಿ ಹತ್ಯೆಯಾದ ಯುವತಿ. ಕೊಲೆಗೈದ ಬಳಿಕ ಗಾಯತ್ರಿಯ ತಂದೆ ಜಯರಾಮ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಗಾಯತ್ರಿಯು ರಾಘವೇಂದ್ರ ಎಂಬ ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು. ಮನೆಯವರು ಬೇಡ ಎಂದರೂ ಕೇಳದೇ ಆತನನ್ನು ಮದುವೆಯಾಗುತ್ತೇನೆ ಎನ್ನುತ್ತಿದ್ದಳು. ಇದರಿಂದ ತಂದೆ ಜಯರಾಮ್ ಕುಪಿತಗೊಂಡಿದ್ದು, ಇಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಊಟ ಕೊಡಲು ಬಂದ ಮಗಳನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ನಂತರ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಡಿವೈಎಸ್‍ಪಿ ರವಿಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News