​ಯಡಮೊಗೆ ಕೊಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2021-06-18 16:02 GMT

ಕುಂದಾಪುರ : ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿ ಗಳನ್ನು ಪೊಲೀಸರು ಇಂದು ಕುಂದಾಪುರದ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಎರಡು ದಿನಗಳ ಕಾಲ ಕಸ್ಟಡಿಯಲ್ಲಿದ್ದ ಆರೋಪಿಗಳಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಈ ವೇಳೆ ರಾಜೇಶ್ ಭಟ್ ಕೃತ್ಯ ಎಸಗಿದ ಸ್ಥಳಕ್ಕೆ ಆಗಮಿಸಲು ಬಳಕೆ ಮಾಡಿದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ದೊಣ್ಣೆ ಇತರ ಸೊತ್ತುಗಳನ್ನು ಕೂಡ ಪೊಲೀಸರು ವಶಪಡಿಸಿ ಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News