ತಮಿಳುನಾಡು ಸಿಎಂ ಸ್ಟಾಲಿನ್‌ ರಿಂದ ಸೋನಿಯಾ ಗಾಂಧಿ ಭೇಟಿ

Update: 2021-06-18 18:00 GMT

ಹೊಸದಿಲ್ಲಿ, ಜೂ. 18: ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಲ್ಲಿನ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು. ‌

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದ ಬಳಿಕ ಸ್ಟಾಲಿನ್ ಹಾಗೂ ಸೋನಿಯಾ ಗಾಂಧಿ ಅವರ ಮೊದಲ ಭೇಟಿ ಇದಾಗಿದೆ. ರಾಜ್ಯದಲ್ಲಿ ನೂತನ ಸರಕಾರದ ಯೋಜನೆಗಳು, ನೀತಿಗಳ ಕುರಿತು ಸ್ಟಾಲಿನ್ ಹಾಗೂ ಸೋನಿಯಾ ಗಾಂಧಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.  

‘‘ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸಾಲಿನ್ ಹಾಗೂ ದುರ್ಗಾವತಿ ಸ್ಟಾಲಿನ್ ಇಂದು ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನನ್ನನ್ನು ಭೇಟಿಯಾಗಿರುವುದು ಸಂತಸ ತಂದಿದೆ’’ ಎಂದು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News