ಜೂ.24ರಂದು ಜಮ್ಮು-ಕಾಶ್ಮೀರದಲ್ಲಿ ಸರ್ವ ಪಕ್ಷ ಸಭೆ ಕರೆದ ಪ್ರಧಾನಿ ಮೋದಿ

Update: 2021-06-19 06:14 GMT

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು -ಕಾಶ್ಮೀರದಲ್ಲಿ ಗುರುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸುವುದು ಸೇರಿದಂತೆ ಇತರ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬಹುದು.  ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರದ  ಇತರ ಕೆಲವು ನಾಯಕರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  2019 ರಲ್ಲಿ ಆರ್ಟಿಕಲ್ 370 ರನ್ನು ರದ್ದುಗೊಳಿಸುವುದರ ಮೇಲಿನ ರಾಜಕೀಯ ಬಿಕ್ಕಟ್ಟನ್ನು ಕೊನೆಗೊಳಿಸುವ ನಿಟ್ಟಿನಲ್ಲಿ  ಪ್ರಧಾನಮಂತ್ರಿಯ ಮೊದಲ ಪ್ರಮುಖ ಪ್ರಯತ್ನ ಇದಾಗಿದೆ.

"ಮುಂದಿನ ವಾರ ಸಭೆಯ ಬಗ್ಗೆ ನಮಗೆ ತಿಳಿಸಲಾಗಿದೆ.  ಔಪಚಾರಿಕ ಆಹ್ವಾನಕ್ಕಾಗಿ ಕಾಯುತ್ತಿದ್ದೇವೆ" ಎಂದು ಜಮ್ಮು ಹಾಗೂ  ಕಾಶ್ಮೀರದ ಹಿರಿಯ ಮುಖಂಡರೊಬ್ಬರು ಎನ್‌ಡಿಟಿವಿಗೆ ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಹಾಗೂ  ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ  ಉನ್ನತ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳನ್ನು ಭೇಟಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News